ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿ ಐದನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ದಾಖಲೆ ನಿರ್ಮಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ 157 ರನ್‍ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 18.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ 5 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಮುಂಬೈ ಪರ ಕ್ವಿಂಟನ್ ಡಿಕಾಕ್ (20), ನಾಯಕ ರೋಹಿತ್ ಶರ್ಮಾ (68), ಸೂರ್ಯ ಕುಮಾರ್ ಯಾದವ್ (19), ಇಶಾನ್ ಕಿಶನ್ (33*) ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಎನ್ರಿಚ್ ನೊರ್ಟ್ಜೆ 2 ವಿಕೆಟ್, ಸ್ಟೋನಿಸ್, ರಬಾಡ 1 ವಿಕೆಟ್ ಪಡೆದರು.
ಇನ್ನು ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಮೊತ್ತವನ್ನು ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ದವನ್ (15), ಶ್ರೇಯಸ್ ಅಯ್ಯರ್ (65*) ಹಾಗು ರಿಷಬ್ (56) ರನ್ ಗಳುಸಿದರು. ಮುಂಬೈ ಪರ ಟ್ರೆಂಟ್ ಬೋಲ್ಟ್ 3 ವಿಕೆಟ್, ನಾತನ್ ಕೌಲ್ಟಾರ್ ನೈಲ್ 2 ವಿಕೆಟ್ ಹಾಗು ಜಯಂತ್ ಯಾದವ್ 1 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.
ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಟ್ರೆಂಟ್ ಬೋಲ್ಟ್ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಇನ್ನು 2020 ರ 13 ನೇ ಆವೃತ್ತಿಯಲ್ಲಿ ಅತ್ಯಧಿಕ ರನ್ ಗಳಿಸಿದ ಕೆ ಎಲ್ ರಾಹುಲ್ ಗೆ ‘ಆರೆಂಜ್ ಕ್ಯಾಪ್’ ಮತ್ತು ಅತ್ಯಧಿಕ ವಿಕೆಟ್ ಪಡೆದ ಕಗಿಸೊ ರಬಾಡಗೆ ‘ಪರ್ಪಲ್ ಕ್ಯಾಪ್’ ಲಭಿಸಿತು.