ದುಬೈ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಮೊದಲ ಕ್ವಾಲಿಫಾಯರ್ ಹಂತದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 57 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿ ಮೊದಲ ತಂಡವಾಗಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ.
ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 201 ರನ್‍ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿ 57 ರನ್ ಗಳ ಅಂತರದಿಂದ ಸೋಲನುಭವಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಮಾರ್ಕಸ್ ಸ್ಟೋನಿಸ್ (65), ಅಕ್ಸಾರ್ ಪಟೇಲ್ (42), ಶ್ರೇಯಸ್ ಅಯ್ಯರ್ (12) ಹಾಗು ರಬಾಡ (15) ರನ್ ಗಳುಸಿದರು. ಮುಂಬೈ ಪರ ಮಾರಕ ಬೌಲಿಂಗ್ ಮಾಡಿದ ಜಸ್ಪ್ರೀತ್ ಬುಮ್ರಾ 4 ವಿಕೆಟ್, ಟ್ರೆಂಟ್ ಬೋಲ್ಟ್ 2 ವಿಕೆಟ್, ಕೃಣಾಲ್ ಪಾಂಡ್ಯ ಹಾಗು ಕಿರಣ್ ಪೊಲ್ಲಾರ್ಡ್ 1 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.
ಇದಕ್ಕೂ ಮುಂಚೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಗಳಿಸಿದರು. ಮುಂಬೈ ಪರ ಕ್ವಿಂಟನ್ ಡಿಕಾಕ್ (40), ಸೂರ್ಯ ಕುಮಾರ್ ಯಾದವ್ (51), ಇಶಾನ್ ಕಿಶನ್ (55) ಹಾಗು ಹಾರ್ದಿಕ್ ಪಾಂಡ್ಯ (37*) ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ 3 ವಿಕೆಟ್, ಸ್ಟೋನಿಸ್ ಹಾಗು ಎನ್ರಿಚ್ ನೊರ್ಟ್ಜೆ ತಲಾ 1 ವಿಕೆಟ್ ಪಡೆದರು.
ಮುಂಬೈ ಇಂಡಿಯನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ಜಸ್ಪ್ರೀತ್ ಬುಮ್ರಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.