ಮುಂಬೈ ಬೌಲರ್ ಗಳ ಬಿರುಗಾಳಿ ಬೌಲಿಂಗ್; ಚೆನ್ನೈ ವಿರುದ್ಧ 10 ವಿಕೆಟ್ ಭರ್ಜರಿ ಜಯ; ಮತ್ತೆ ಅಗ್ರ ಸ್ಥಾನಕ್ಕೇರಿದ ಮುಂಬೈ

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 41 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ದ 10 ವಿಕೆಟ್…

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 41 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ದ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರಿಂದ ಚೆನ್ನೈ ಪ್ಲೇ ಆಫ್ ಕನಸು ಬಹುತೇಕ ಅಂತ್ಯಗೊಂಡಿದೆ.

115 ರನ್ ಸಾದಾರಣ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 12.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 116 ರನ್ ಗಳಿಸಿ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.. ಮುಂಬೈ ಪರ ಆರಂಭಿಕ ಆಟಗಾರರಾದ ಇಶಾನ್ ಕಿಶನ್ -68* ಕ್ವಿಂಟನ್ ಡಿಕಾಕ್-46* ರನ್ ಗಳಿಸಿದರು. ಚೆನ್ನೈ ಪರ ಯಾವ ಬೌಲರ್ ಕೂಡ ಒಂದೇ ಒಂದು ವಿಕೆಟ್ ಪಡೆಯಲಿಲ್ಲ.

ಇದಕ್ಕೂ ಮುಂಚೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ಬಿರುಗಾಳಿ ಬೌಲಿಂಗ್ ನಲುಗಿ 20 ಓವರ್ ಗಳಲ್ಲಿ 9 ಕಳೆದುಕೊಂಡು ಕೇವಲ 114 ರನ್ ಗಳ ಸಾದಾರಣ ಮೊತ್ತವನ್ನು ಕಲೆಹಾಕಿತು. ಚೆನ್ನೈ ಪರ ಸ್ಯಾಮ್ ಕರಣ್-52, ದೋನಿ-16 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ಪರ ಅದ್ಬುತ ಬೌಲಿಂಗ್ ಪ್ರದರ್ಶನ ನೀಡಿದ ಟ್ರೆಂಟ್ ಬೋಲ್ಟ್ 4 ವಿಕೆಟ್, ಬುಮ್ರಾ , ರಾಹುಲ್ ಚಾಹರ್ ತಲಾ 2 ವಿಕೆಟ್ ಹಾಗು ನಾಥನ್ ಕೋಲ್ಟಾರ್ ನೈಲ್ 1 ವಿಕೆಟ್ ಪಡೆದರು.

Vijayaprabha Mobile App free

ಮುಂಬೈ ಇಂಡಿಯನ್ಸ್ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಟ್ರೆಂಟ್ ಬೋಲ್ಟ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇದನ್ನು ಓದಿ: ಟೀಮ್ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.