ಬುಮ್ರಾ, ಬೋಲ್ಟ್ ಮಾರಕ ಬೌಲಿಂಗ್; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ ತಂಡಕ್ಕೆ 9 ವಿಕೆಟ್ ಭರ್ಜರಿ ಜಯ

ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ ಗಳ…

ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ 111 ರನ್‍ಗಳ ಸಾದಾರಣ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 111 ರನ್ ಗಳಿಸಿ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಮುಂಬೈ ಇಂಡಿಯನ್ಸ್ ಪರ ಕ್ವಿಂಟನ್ ಡಿಕಾಕ್ (26), ಇಶಾನ್ ಕಿಶನ್ (72*), ಸೂರ್ಯ ಕುಮಾರ್ ಯಾದವ್ (12*) ರನ್ ಗಳುಸಿದರು. ಡೆಲ್ಲಿ ಕಾಪಿಟಲ್ಸ್ ಪರ ಎನ್ರಿಚ್ ನೊರ್ಟ್ಜೆ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ಬೌಲರ್ ಗಳ ಮಾರಕ ಬೌಲಿಂಗ್ ಗೆ ತತ್ತರಿಸಿ 9 ವಿಕೆಟ್ ಕಳೆದುಕೊಂಡು ಕೇವಲ 110 ರನ್ ಗಳಿಸಿದರು. ಡೆಲ್ಲಿ ಪರ ಶ್ರೇಯಸ್ ಅಯ್ಯರ್ (25), ರಿಷಬ್ ಪಂತ್ (21), ಅಶ್ವಿನ್ (12) ರನ್ ಗಳಿಸಿದರು. ಮುಂಬೈ ಪರ ಬುಮ್ರಾ, ಬೋಲ್ಟ್ ತಲಾ 3 ವಿಕೆಟ್, ಕೌಲ್ಟಾರ್ ನೈಲ್ ಹಾಗು ರಾಹುಲ್ ಚಾಹರ್ ತಲಾ 1 ವಿಕೆಟ್ ಪಡೆದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.