ಡಿಕಾಕ್, ಯಾದವ್ ಅರ್ಧ ಶತಕದ ಆಸರೆ; ಮುಂಬೈ ಇಂಡಿಯನ್ಸ್ ತಂಡಕ್ಕೆ 5 ವಿಕೆಟ್ ಗಳ ಗೆಲುವು

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.…

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

163 ರನ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು. ಮುಂಬೈ ಪರ ಆರಂಭಿಕ ಆಟಗಾರದ ಕ್ವಿಂಟನ್ ಡಿಕಾಕ್-53, ಸೂರ್ಯ ಕುಮಾರ್ ಯಾದವ್-53, ಇಶಾನ್ ಕಿಶನ್-28 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ರಬಾಡ 2 ವಿಕೆಟ್, ಅಶ್ವಿನ್, ಅಕ್ಸಾರ್ ಪಟೇಲ್ ಹಾಗು ಸ್ಟೋನಿಸ್ ತಲಾ 1 ವಿಕೆಟ್ ಪಡೆದರು.

ಇನ್ನು ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಆರಂಭಿಕ ಆಟಗಾರ ಶಿಖರ್ ಧವನ್-69, ನಾಯಕ ಶ್ರೇಯಸ್ ಅಯ್ಯರ್-42 ಅವರ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎಲ್ಲಾ 4 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ಪರ ಕೃಣಾಲ್ ಪಾಂಡ್ಯ 2 ವಿಕೆಟ್, ಟ್ರೆಂಟ್ ಬೋಲ್ಟ್ 1 ವಿಕೆಟ್ ಪಡೆದರು.

Vijayaprabha Mobile App free

ಮುಂಬೈ ಇಂಡಿಯನ್ಸ್ ಪರ ಉತ್ತಮ ಪ್ರದರ್ಶನ ನೀಡಿದ ಕ್ವಿಂಟನ್ ಡಿಕಾಕ್ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇದನ್ನು ಓದಿ: ಕುರುಬ ಸಮುದಾಯದ ಎಸ್ಟಿ ಮೀಸಲಾತಿ: ದೆಹಲಿಯಲ್ಲಿ 5 ಲಕ್ಷ ಕುರುಬರಿಂದ ಹೋರಾಟ…!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.