Mumbai: ರೈಲು ಹತ್ತುವ ವೇಳೆ ನೂಕುನುಗ್ಗಲು: ಕಾಲ್ತುಳಿದಲ್ಲಿ 9 ಮಂದಿಗೆ ಗಾಯ

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ರೈಲು ಹತ್ತಲು ನೂಕುನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಉಂಟಾಗಿ 9 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ…

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ರೈಲು ಹತ್ತಲು ನೂಕುನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಉಂಟಾಗಿ 9 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ ನಡೆದಿದೆ. 

22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲು ಹತ್ತಲು ವಿಪರೀತ ಜನದಟ್ಟಣೆ ಇತ್ತು. ಎಲ್ಲರೂ ಏಕಕಾಲಕ್ಕೆ ಹತ್ತಲು ಮುಂದಾದ ವೇಳೆ ನೂಕುನುಗ್ಗಲು ಉಂಟಾದ ಪರಿಣಾಮ ಕೆಲವರು ಅಸ್ವಸ್ಥಗೊಂಡಿದ್ದಾರೆ ಎಂದು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ರವಾನಿಸಲಾಗಿದೆ. 

ಗಾಯಗೊಂಡವರನ್ನು ಶಭೀರ್ ಅಬ್ದುಲ್ ರೆಹಮಾನ್(40), ಪರಮೇಶ್ವರ ಸುಖದರ್ ಗುಪ್ತಾ(28), ರವೀಂದ್ರ ಹರಿಹರ ಚುಮಾ(30), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ(29), ಸಂಜಯ್ ತಿಲಕ್ರಂ ಕಾಂಗೇ(27), ದಿವ್ಯಾಾಂಶು ಯೋಗೇಂದ್ರ ಯಾದವ್(18), ಮೊಹಮ್ಮದ್ ಶರೀಫ್ ಶೇಖ್(25), ಇಂದ್ರಜಿತ್ ಸಹಾನಿ(19) ಮತ್ತು ನೂರ್ ಮೊಹಮ್ಮದ್ ಶೇಖ್(18) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.