ಮುನಿರತ್ನ ಅವರೆ ಕಾನೂನು ಬಾಹಿರ ಚಟುವಟಿಕೆ, ಗೂಂಡಾಗಿರಿಗೆ ಮೂಲ ಕಾರಣ: ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಕ್ಕೆ ಬಿಜೆಪಿ ಪಕ್ಷದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ,…

Siddaramaih vijayaprabha

ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಕ್ಕೆ ಬಿಜೆಪಿ ಪಕ್ಷದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ.

ಆರ್.ಆರ್ ನಗರದ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆ, ಗೂಂಡಾಗಿರಿಗೆ ಮೂಲ ಕಾರಣ. ಮುನಿರತ್ನ ಅವರೆ ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಬಿಟ್ಟು ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

Vijayaprabha Mobile App free

ನಮ್ಮ ಪಕ್ಷದ ಅಭ್ಯರ್ಥಿಯಾದ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಹಣ ಹಂಚುವುದು, ಚಾರಿತ್ರ್ಯಹರಣ, ಗೂಂಡಾಗಿರಿಯಂತಹ ಅಡ್ಡದಾರಿ ಹಿಡಿಯುತ್ತಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳುತ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.