ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು ತೀರಾ ಅಂದ್ರೆ ತೀರಾ ಸಣ್ಣವನು, ಡಿ.ಕೆ.ಶಿವಕುಮಾರ್ ಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ ಎಂದು ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿಕೆ ನೀಡಿದ್ದಾರೆ.
ರಾಜಕೀಯ, ದ್ವೇಷ, ಅಸೂಯೆಗಳಿಗೆ ಉತ್ತರ ಕೊಡುವುದಿಲ್ಲ. ಕ್ಷೇತ್ರದಲ್ಲಿ ಮುನಿರತ್ನ ಕೆಲಸ ಮಾಡ್ತಾರೆಂದು ಜನ ಹೇಳ್ತಿದ್ದಾರೆ. ಅವರಿಗೆ ಅವಕಾಶ ನೀಡಬೇಕೆಂದು ಜನ ಹೇಳಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿದ್ದಾರೆ.
ಆರ್.ಆರ್ ನಗರ ಕ್ಷೇತ್ರ ಶಾಂತಿಯುತ ವಿಧಾನಸಭಾ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸ ಯಾರು ಮಾಡಬಾರದು. ಅಕ್ಟೊಬರ್ 31 ರಂದು ಸಿಎಂ ಯಡಿಯೂರಪ್ಪ ಅವರು ಪ್ರಚಾರ ಮಾಡ್ತಾರೆ ಎಂದು ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿದ್ದಾರೆ.