ಮಂಗಳೂರು: ತುಳು ಚಿತ್ರರಂಗದ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಭಂಡಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು ಬಿ.ಸಿ. ರೋಡ್ ನ ಫ್ಲ್ಯಾಟ್ ವೊಂದರಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಅಲ್ಲೇ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಇಂದು ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
2018 ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ತುಳು ನಟ ಸುರೇಂದ್ರ ಬಂಟ್ವಾಳ್ ಅವರ ಹೆಸರು ಕೇಳಿ ಬಂದಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ನಂತರ ಸುರೇಂದ್ರ ಬಂಟ್ವಾಳ್ ಅವರನ್ನು ಪೊಲೀಸರು ಬಂಧಿಸಿದ್ದರು.