ಹುಬ್ಬಳ್ಳಿ: ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯ ಕಂ. ರೌಡಿಶೀಟರ್ ನನ್ನು ತಲ್ವಾರ್‌ನಿಂದ ಕಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಗಂಗಿವಾಳ ಗ್ರಾಮ ಪಂಚಾಯಿತಿಯ ರಾಯನಾಳ ಗ್ರಾಮದಲ್ಲಿ ನಡೆದಿದೆ.
ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಶಿವಾಜಿ ಪಟದಾರಿ(32) ಕೊಲೆಯಾದ ವ್ಯಕ್ತಿಯಾಗಿದ್ದು, ಮೃತ ದೀಪಕ್ ಗಂಗಿವಾಳ ಗ್ರಾಮ ಪಂಚಾಯತಿ ಸದಸ್ಯನಾಗಿದ್ದ ಅಲ್ಲದೇ ಪಠದಾರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಮೆಯಲ್ಲಿ ರೌಡಿ ಶೀಟರ್ ಆಗಿದ್ದ ಎನ್ನಲಾಗಿದೆ.
ಇನ್ನು, ಸೋಮವಾರ ತಡರಾತ್ರಿ ಹಲ್ಲೆಯಾಗಿದ್ದು, ದೀಪಕ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರೀತಿಸಿ ಮದುವೆಯಾದ ಕಾರಣ, ರಾಜಕೀಯ ದ್ವೇಷದಿಂದ ಕೊಲೆಯಾಗಿರಬಹುದೆಂದು ಶಂಕೆ ವ್ಯಕ್ತವಾಗಿದ್ದು, ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




