ಮುರುಡೇಶ್ವರದಲ್ಲಿ ಸಮುದ್ರಕ್ಕಿಳಿದ ವಿದ್ಯಾರ್ಥಿನಿಯರಲ್ಲಿ ಉಳಿದ ಮೂವರ ಶವಗಳೂ ಪತ್ತೆ

ಕಾರವಾರ: ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸ ಬಂದು ಮುರುಡೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿ ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ. ಕೋಲಾರ ಮುಳಬಾಗಿಲು ಭಾಗದ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಿನ್ನೆ ಸಂಜೆ…

ಕಾರವಾರ: ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸ ಬಂದು ಮುರುಡೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿ ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ.

ಕೋಲಾರ ಮುಳಬಾಗಿಲು ಭಾಗದ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಿನ್ನೆ ಸಂಜೆ ಮುರುಡೇಶ್ವರಕ್ಕೆ ಬಂದಿದ್ದು, ಸಮುದ್ರಕ್ಕಿಳಿದಿದ್ದಾರೆ.

ಈ ಪೈಕಿ ವಿದ್ಯಾರ್ಥಿನಿ ಶ್ರಾವಂತಿ (15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಇನ್ನು ಮೂವರು ಕಾಣೆಯಾಗಿದ್ದರು. ದೀಕ್ಷಾ (15) ಲಾವಣ್ಯ (15) ಮತ್ತು ವಂದನಾ (15) ಅವರ ಮೃತ ದೇಹಗಳನ್ನು ಇದೀಗ ಕರಾವಳಿ ಕಾವಲು ಪಡೆ ಹೊರ ತೆಗೆದಿದೆ. ಇದರೊಂದಿಗೆ ಈ ಘೋರ ದುರಂತದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿರುವುದು ದೃಢಪಟ್ಟಿದೆ.

Vijayaprabha Mobile App free

ಆಗಿದ್ದೇನು?

46 ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿ ಒಟ್ಟು 57 ಜನರು ಬಸ್‌ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು, ಸಂಜೆ ವೇಳೆ ಸಮುದ್ರ ನೀರಿನಲ್ಲಿ ಈಜುವಾಗ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಮೂವರು ಆಸ್ಪತ್ರೆಗೆ:

ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶೋಧಾ (15), ವೀಕ್ಷಣಾ (15), ಲಿಪಿಕಾ (15) ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವರ ಸಂತಾಪ:

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

5 ಲಕ್ಷ ಪರಿಹಾರ:

ಮೃತ ವಿದ್ಯಾರ್ಥಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ‌ ಮಾಡಲಾಗಿದೆ.

ಮೃತ ದೇಹ ರವಾನೆಗೆ ವ್ಯವಸ್ಥೆ; ಭೈರತಿ ಸುರೇಶ್ ಸೂಚನೆ:

ಮೃತ ವಿದ್ಯಾರ್ಥಿನಿಯರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಜಿಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ‌ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply