ಮುರ್ಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಣೆ

ಕಾರವಾರ: ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದು, ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಮೃತಪಟ್ಟಂತಹ ವಿದ್ಯಾರ್ಥಿನಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ…

ಕಾರವಾರ: ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದು, ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಮೃತಪಟ್ಟಂತಹ ವಿದ್ಯಾರ್ಥಿನಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದ ವೇಳೆ ನಿನ್ನೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳೆ.

Vijayaprabha Mobile App free

ಇನ್ನೂ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಈ ಮೂವರು ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ದುರಂತ ಹಿನ್ನಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮುರ್ಡೇಶ್ವರದಲ್ಲಿ ಮೊಕ್ಕಾಂ ಹೂಡಿದ್ದು, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಭಂದ ವಿಧಿಸಲಾಗಿದೆ.

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿನಿಯರು ನೀರುಪಾಲಾಗಿರುವ ಪ್ರಕರಣ ಸಂಬಂಧ ಇದೀಗ ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.