ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದ್ದು, ಮುರುಘಾ ಶ್ರೀಗಳ ಪ್ರಕರಣದ ಬಗ್ಗೆ BJP, ಕಾಂಗ್ರೆಸ್, JDS ಮೌನಕ್ಕೆ ಜಾರಿದ್ದು, ಕಾನೂನು ಪ್ರಕಾರ ಕ್ರಮ ನಡೆಯಲಿ ಎಂದು ರಾಜಕಾರಣಿಗಳು ಹೇಳುತ್ತಿದ್ದಾರೆ.
ಆದರೆ, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಮೌನ ಮುರಿದಿದ್ದು, ‘ಮುರುಘಾ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿ ಬಹಿರಂಗಗೊಳಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗದ
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.— Siddaramaiah (@siddaramaiah) September 2, 2022