ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಹೌದು, ಸಂತ್ರಸ್ತ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ. CRPC ಸೆಕ್ಷನ್ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ಇಂದು(ಗುರುವಾರ) ಪೊಲೀಸರು ನೊಟೀಸ್ ನೀಎಬಹುದು ಎಂದು ಹೇಳಲಾಗ್ತಿದೆ.
ಅಲ್ಲದೆ, ಚಿತ್ರದುರ್ಗ ಎಸ್ಪಿ ಪರುಶುರಾಮ್ ಅವರಿಗೆ ಸುಮೊಟೋ ಕೇಸ್ ದಾಖಲಿಸಿಕೊಂಡು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ (NCPCR)ದಿಂದ ನೋಟಿಸ್ ನೀಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು 9 ಪ್ರಶ್ನೆ ಕೇಳಿ, 7 ದಿನದೊಳಗೆ ಉತ್ತರಿಸುವಂತೆ ತಿಳಿಸಿದೆ. ಇದರಿಂದ ಪೊಲೀಸರು ಹೈಅಲರ್ಟ್ ಆಗಿದ್ದಾರೆ.