ಅಪಘಾತಕ್ಕೆ ಈಡಾಗಿದ್ದು ನನ್ನ ಕಾರಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ನನ್ನ ಕಾರು ಅಪಘಾತವಾಗಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಬೇರೊಂದು ಕಾರು…

pratap Simha vijayaprabha news

ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ನನ್ನ ಕಾರು ಅಪಘಾತವಾಗಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಬೇರೊಂದು ಕಾರು ಅಪಘಾತವಾಗಿತ್ತು. ಆ ಬಗ್ಗೆ ನಾನೇ ಪೊಲೀಸರಿಗೆ ಮಾಹಿತಿ ನೀಡಿದ್ದೆ. ಹಾಗಾಗಿ ಅಧಿಕಾರಿಗಳು ನನ್ನ ಕಾರೆ ಅಪಘಾತಕ್ಕೀಡಾಗಿದೆ ಎಂದು ಭಾವಿಸಿದ್ದಾರೆ.

ಆದರೆ ನನ್ನ ಕಾರು ಅಪಘಾತವಾಗಿಲ್ಲ. ಘಟನೆಯಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ನಾನೇ ಆಸ್ಪತ್ರೆಗೆ ಕಳುಹಿಸಿಕೊಟ್ಟೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಮಾಹಿತಿ ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.