Mysore Dussehra 2024 : ಮೈಸೂರು ದಸರಾ 2024 ಉದ್ಘಾಟನೆ, ಈ ಬಾರಿಯ ವಿಶೇಷತೆಗಳೇನು?

Mysore Dussehra 2024 Mysore Dussehra 2024
Mysore Dussehra 2024

Mysore Dussehra 2024 : ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dussehra) ಮಹೋತ್ಸವವನ್ನು ಸಾಹಿತಿ ಹಂ ಪ ನಾಗರಾಜಯ್ಯ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಿಗ್ಗೆ 9.15 ರಿಂದ 9.45ರ ನಡುವಿನ ವೃಶ್ಚಿಕ ಲಗ್ನದಲ್ಲಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ಕಾರು, ಬೈಕ್ ಇದ್ರೆ ರೇಷನ್​​ ಕಾರ್ಡ್​​ ರದ್ದು; ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್​ ಶಾಕ್

ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು. ಅಕ್ಟೋಬರ್‌ 3 ರಿಂದ 11 ರವರೆಗೆ ಅರಮನೆಯಲ್ಲಿ ಖಾಸಗಿ ದರ್ಬಾರ್‌ ನಡೆಯಲಿದೆ. ಇಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ.

Advertisement

Mysore Dussehra 2024 vijayaprabha

Mysore Dussehra 2024: ಕಾರ್ಯಕ್ರಮಗಳೇನು?

ಅಕ್ಟೋಬ‌ರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅ.12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ & ಕುದುರೆ ಪೂಜೆ ನೆರವೇರಲಿದೆ.

ಇದನ್ನೂ ಓದಿ: ನಾಗಚೈತನ್ಯ-ಸಮಂತಾ ವಿಚ್ಛೇದನಕ್ಕೆ ಕೆಟಿಆರ್‌ ಕಾರಣ ವಿವಾದ : ಸಮಂತಾ, ಎನ್‌ಟಿಆರ್, ನಾಗಾರ್ಜುನ ಆಕ್ರೋಶ!

Mysore Dussehra 2024: ಜಂಬೂ ಸವಾರಿ

ದಸರಾ ಮಹೋತ್ಸವದ ಕೊನೆಯ ದಿನ ಅಕ್ಟೋಬರ್ 13ರ೦ದು ವಿಜಯ ದಶಮಿ ಪೂಜೆ ನೆರವೇರಲಿದೆ. ಸಂಜೆ 04.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 07.30ರ ನಂತರ ಪಂಜಿನ ಕವಾಯತು ನಡೆಯಲಿದೆ.

Mysore Dussehra 2024

Mysore Dussehra 2024: ವಿಶೇಷತೆ ಏನು?

ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ದಸರಾ ಸ೦ಬ೦ಧ ಕಾರ್ಯಕ್ರಮಗಳ ಪಟ್ಟಿ & ಉದ್ಘಾಟಕರು ಯಾರೆಂಬುದನ್ನು ಸರ್ಕಾರ ಪ್ರಕಟಿಸಬೇಕಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಮೊದಲ ವಾರ ಯಾರಿಗೆ ಗೇಟ್‌ ಪಾಸ್? ಚೈತ್ರಾ ಕುಂದಾಪುರಗೆ ಸಿಗುತ್ತಾ ಗೇಟ್‌ ಪಾಸ್?

Mysore Dussehra 2024: ಮೈಸೂರು ದಸರಾ ಇತಿಹಾಸ

Mysore Dussehra 2024

ದಸರಾ ಹಬ್ಬಕ್ಕೆ 400 ವರ್ಷಗಳಿಗೂ ಹೆಚ್ಚು ಇತಿಹಾಸವಿದೆ. ಸುಮಾರು 14ನೇ ಶತಮಾನದಲ್ಲಿ ಪ್ರಾರಂಭವಾದ ಈ ಉತ್ಸವ ಸಾಮಾನ್ಯವಾಗಿ ಸೆಪ್ಟೆಂಬರ್ ಕೊನೆಯಲ್ಲಿ ಅಥವಾ ಅಕ್ಟೋಬರ್‌ನಲ್ಲಿ ಬರುತ್ತದೆ. ಇದು 10 ದಿನಗಳ ಹಬ್ಬವಾಗಿದೆ. ಮೈಸೂರು ದಸರಾ ‘ನಾಡಹಬ್ಬ’ ಎಂದೇ ಪ್ರಸಿದ್ಧವಾಗಿದೆ.

Mysore Dussehra 2024: ಗೋಲ್ಡ್ ಕಾರ್ಡ್ ಪ್ರಯೋಜನವೇನು?

ದಸರಾ ಗೋಲ್ಡ್ ಕಾರ್ಡ್ ಮೈಸೂರಿನ ವಿವಿಧ ಪ್ರವಾಸಿ ತಾಣಗಳಿಗೆ ತಡೆರಹಿತ ಪ್ರವೇಶ & ನಿರ್ಗಮನವನ್ನು ಖಚಿತಪಡಿಸುತ್ತದೆ. ಇದು ಜಂಬೂ ಸವಾರಿ ಮೆರವಣಿಗೆ ಪ್ರವೇಶಾತಿಯನ್ನು ಒಳಗೊಂಡಿದೆ. ಮೈಸೂರು ಜಿಲ್ಲಾಡಳಿತದಿಂದ ಆನ್‌ಲೈನ್‌ನಲ್ಲಿ ಗೋಲ್ಡ್ ಕಾರ್ಡ್‌ಗಳನ್ನು ನೀಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!