ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿದ್ದಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಫ್ರೆಶರ್ ಗೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ ನಮಗೆ ಪರೀಕ್ಷೆ ಬರೆಯಲು ಸೂಚಿಸಲಾಗಿದೆ. ಅವರದ್ದು ಜೀವ, ನಮ್ಮದು ಜೀವವಲ್ಲವೇ? ಪುನರಾವರ್ತಿತ ವಿದ್ಯಾರ್ಥಿಗಳು ಶಿಕ್ಷಣ ಸಚಿವರನ್ನು ಪ್ರಶ್ನಿಸಿದ್ದಾರೆ.
ಇನ್ನು, ನಾವು ಒಂದೋ, ಎರಡೋ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದೇವೆ. ಹೀಗಿದ್ದರೂ ನಮಗೊಂದು ನ್ಯಾಯ, ಅವರಿಗೊಂದು ನ್ಯಾಯವೇ? ಇದು 18 ತುಂಬಿದ ಯುವಕರ ಸೆಳೆಯಲು ಮಾಡಿದ ಮತ ಬ್ಯಾಂಕ್ ರಾಜಕಾರಣವಲ್ಲವೇ? ಎಂದು ಪುನರಾವರ್ತಿತ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.