BIG NEWS: ದಿನದಲ್ಲಿ 7 ತಾಸು ನಮ್ಮ ಮೆಟ್ರೊ ಸಂಚಾರ; ಮಾರ್ಗಸೂಚಿ ಪ್ರಕಟ

ಬೆಂಗಳೂರು: ನಮ್ಮ ಮೆಟ್ರೋ ನಾಳೆಯಿಂದ (ಜೂನ್ 21) ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ…

ಬೆಂಗಳೂರು: ನಮ್ಮ ಮೆಟ್ರೋ ನಾಳೆಯಿಂದ (ಜೂನ್ 21) ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ.

ಬೆಳಗ್ಗೆ 7ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚಾರ ನಡೆಸಲಿದೆ. ಆದರೆ ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಸಂಚರಿಸಲು ಅವಕಾಶವಿದ್ದು, ನಿಲ್ದಾಣದಲ್ಲಿ ಪ್ರಯಾಣಿಕರು ಕೊರೋನಾ ನಿಯಮಾವಳಿ ಪಾಲಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಮಾರ್ಗಸೂಚಿ ಪ್ರಕಟ:

Vijayaprabha Mobile App free

ಇನ್ನು, ಬೆಂಗಳೂರಿನಲ್ಲಿ ಇದೇ 21ರಿಂದ 2ನೇ ಹಂತದ ಅನ್ ಲಾಕ್ ಘೋಷಿಸಲಾಗಿದ್ದು, ಈ ಹಿನ್ನೆಲೆ ‘ನಮ್ಮ ಮೆಟ್ರೋ’ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವು ಈ ಕೆಳಗಿನಂತಿವೆ:

*ಸ್ಮಾರ್ಟ್ ಕಾರ್ಡ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

*ವೆಬ್‌ಸೈಟ್, ಆನ್‌ಲೈನ್‌ ಟಾಪ್‌ಅಪ್ ಮೂಲಕ ಕಾರ್ಡ್ ಖರೀದಿ & ರಿಚಾರ್ಜ್ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿದೆ.

*ಫೇಸ್‌ ಮಾಸ್ಕ್‌, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದ್ದು, ಪ್ರವೇಶಕ್ಕೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಕೆ

*ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲು ತಿಳಿಸಲಾಗಿದ್ದು, ಲಿಫ್ಟ್ ನಲ್ಲಿ ನಾಲ್ವರಿಗೆ ಅನುಮತಿ ನೀಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.