NAMO Drone Didi Scheme : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಲೋಕಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಹೌದು, ಕೇಂದ್ರ ಸರ್ಕಾರ ಮಹಿಳೆಯರಿಗೆ ಮಾತ್ರ ನಮೋ ಡ್ರೋನ್ ದೀದಿ ಯೋಜನೆಯನ್ನ (NAMO Drone Didi Scheme) ಪ್ರಾರಂಭಿಸಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ 1,261 ಕೋಟಿ ರೂ. ನೀಡಲು ನಮೋ ಡ್ರೋನ್ ದೀದಿ ಯೋಜನೆಗೆ ಕೇಂದ್ರ ಅನುಮೋದನೆ ನೀಡಿದ್ದು, ಈ ಯೋಜನೆಯ ಭಾಗವಾಗಿ ಮಹಿಳಾ ಗುಂಪುಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಇದು ಕೃಷಿ ವಲಯದಲ್ಲಿ ಕೀಟನಾಶಕಗಳನ್ನ ಸಿಂಪಡಿಸಲು ಮಹಿಳಾ ಗುಂಪುಗಳಿಗೆ ನೆರವು ನೀಡುತ್ತದೆ.
ಇದನ್ನೂ ಓದಿ: Bhagyalakshmi yojana : ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯ ಪ್ರಯೋಜನಗಳು
ಇನ್ನು, ಡ್ರೋನ್‌ನ ಖರೀದಿ ಬೆಲೆಯ ಗರಿಷ್ಠ 80 ಪ್ರತಿಶತ ಅಥವಾ 8 ಲಕ್ಷ ರೂ.ಗಳನ್ನು ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. 14,500 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್’ಗಳನ್ನ ಒದಗಿಸುವ ಗುರಿಯನ್ನ ಕೇಂದ್ರ ಸರ್ಕಾರ ಹೊಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment