Nandini Dosa : ಇನ್ಮುಂದೆ ಗ್ರಾಹಕರಿಗೆ ‘ನಂದಿನಿ’ ಹಾಲಷ್ಟೇ ಅಲ್ಲ, ‘ನಂದಿನಿ ಇಡ್ಲಿ ಮತ್ತು ದೋಸೆ’ ಹಿಟ್ಟು ಕೂಡ ಸಿಗಲಿದೆ. ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು CM ಸಿದ್ದರಾಮಯ್ಯ ಬುಧವಾರ(ಡಿ.25) ಬಿಡುಗಡೆ ಮಾಡಿದರು.
ಹೌದು, ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ನಂದಿನಿ’ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೊಟೀನ್‌ಯುಕ್ತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ: Holiday | ಇಂದಿನಿಂದ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ಬೆಳಗ್ಗಿನ ಉಪಾಹಾರವು ಗರಿಗರಿ ದೋಸೆ, ಸವಿಸವಿ ಇಡ್ಲಿಯೊಂದಿಗೆ ರುಚಿ ಮತ್ತು ಆರೋಗ್ಯವನ್ನು ವೃದ್ಧಿಗೊಳಿಸಲಿದೆ.
ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: WhatsApp ನಿಂದ ಬಳಕೆದಾರರಿಗೆ ಫೆಸ್ಟಿವಲ್ ಥೀಮ್ ಘೋಷಣೆ