ನಂದಿನಿ ಹಾಲಿನ ಮೇಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಮುಂದಾಗಿದ್ದು, ಹೈನುಗಾರಿಕೆಗೆ ಉತ್ತೇಜನ ಮತ್ತು ಹಾಲು ಉತ್ಪಾದಕರ ಆರ್ಥಿಕ ಅಭಿವೃದ್ಧಿಯ ಉದ್ದೇಶದಿಂದ ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ದರ ಹೆಚ್ಚಳದ ಪ್ರಸ್ತಾವನೆಗೆ ಸರ್ಕಾರವೂ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಹಾಗಾಗಿ, ಕೆಎಂಎಫ್‌ನ ಎಲ್ಲ 14 ಜಿಲ್ಲಾ ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿವೆ ಎಂದು ಹೇಳಲಾಗಿದೆ. ಕೆಎಂಎಫ್‌ನಲ್ಲಿ ಪ್ರತೀ ಲೀಟರ್‌ಗೆ 37 ರೂ ಇದ್ದು, ಇದೀಗ ಹೆಚ್ಚಿಸಲಿರುವ ದರವನ್ನು ರೈತರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಲ ಮೂಲಗಳು ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.