ದಾವಣಗೆರೆ ಸೆ.05 : ಕರ್ನಾಟಕ ರಾಜ್ಯ ಬೀಜ ನಿಗಮ (ನಿ) ಆವರಣ, ಲೋಕಿಕೆರೆ ರಸ್ತೆ, ದಾವಣಗೆರೆ ಇಲ್ಲಿ ನಬಾರ್ಡ್-ಆರ್.ಐ.ಡಿ.ಎಫ್-27 ಯೋಜನೆಯಡಿ ನಿರ್ಮಿಸಲಾಗುವ ಶೀತಲ ಘಟಕ ಸಮಗ್ರ ಕೃಷಿ ಪದ್ದತಿಯ ಶ್ರೇಷ್ಠತಾ ಕೇಂದ್ರ ಮತ್ತು ಕೃಷಿಯಲ್ಲಿ ಕೃತಕ ಬುದ್ದಿಮತ್ತ್ಯೆ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಸೆ.06 ರಂದು ಸಂಜೆ 4 ಗಂಟೆಗೆ ಏರ್ಪಡಿಸಲಾಗಿದೆ.
ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಶಂಕುಸ್ಥಾಪನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ ಅಧ್ಯಕ್ಷತೆ ವಹಿಸುವರು. ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ ಕೃಷಿ ವಸ್ತು ಪ್ರದರ್ಶನಗಳ ಮಳಿಗೆಗಳನ್ನು ಉದ್ಘಾಟಿಸುವರು.
ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿರುವ ಕೃಷಿ ವಿಜ್ಞಾನಿಗಳೊಂದಿಗೆ ಚರ್ಚಾಗೋಷ್ಠಿ, ತಾಂತ್ರಿಕ ಸಮಾವೇಶ, ಕೃಷಿ ವಸ್ತು ಪ್ರದರ್ಶನದ ಪ್ರಯೋಜನ ಪಡೆದುಕೊಳ್ಳಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.