Baba Siddiqui shot dead : ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಮೇಲೆ ಮುಂಬೈನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹೌದು, ಮಹಾರಾಷ್ಟ್ರದ ಮಾಜಿ ಸಚಿವ ಹಾಗು NCPಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕ್ ಮೇಲೆ ಗುಂಡಿನ ದಾಳಿ ನಡೆದಿದ್ದು,ಕೂಡಲೇ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಸ್ಯಾಮ್ಸನ್ ಭರ್ಜರಿ ಶತಕ, ಸೂರ್ಯ ಅಬ್ಬರದ ಅರ್ಧಶತಕ; ಭಾರತಕ್ಕೆ 133 ರನ್ ಗಳ ಭರ್ಜರಿ ಜಯ, ಸರಣಿ ಕ್ಲೀನ್ ಸ್ವೀಪ್
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ರಾತ್ರಿ 9.30ರ ಸುಮಾರಿಗೆ ಸಿದ್ದಿಕ್ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Baba Siddiqui shot dead : ಬಾಬಾ ಸಿದ್ದಿಕ್ ಯಾರು?
ಬಾಂದ್ರಾ ಬಾಯ್ ಎಂದೂ ಕರೆಯಲ್ಪಡುವ ಬಾಬಾ ಸಿದ್ದಿಕ್ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತರಾಗಿದ್ದು,ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ, ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.