India – South Africa first Test : ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ತನ್ನ ಮೊದಲ ಟೆಸ್ಟ್ ಪಂದ್ಯ ಆಡುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಶಿಸ್ತಿನ ದಾಳಿಗೆ ಚಾಂಪಿಯನ್ಸ್ ದಕ್ಷಿಣ ಆಫ್ರಿಕಾ ಕೇವಲ 159 ರನ್ಗೆ ಆಲೌಟ್ ಆಗಿದೆ.
ಹೌದು, ಟೀಂ ಇಂಡಿಯಾದ ಶಿಸ್ತಿನ ದಾಳಿಗೆ ತತ್ತರಿಸಿದ 55 ಓವರ್ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 159 ರನ್ಗೆ ಆಲೌಟ್ ಆಗಿದೆ. ದ.ಆಫ್ರಿಕಾ ಪರ, ಮಾರ್ಕ್ರಮ್ 31, ಟೋನಿ 24 ರನ್ಗಳಿಸಿದರೆ ಉಳಿದ ಬ್ಯಾಟರ್ಸ್ ವಿಫಲರಾದರು. ಭಾರತದ ಪರ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದರೆ, ಸಿರಾಜ್ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್, ಅಕ್ಷರ್ ಪಟೇಲ್ 1 ವಿಕೆಟ್ ಪಡೆದು ಮಿಂಚಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




