ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಹೊಸ ವರ್ಷಾಚರಣೆ ಆಚರಿಸುವ ಬಗ್ಗೆ ನೂತನ ಮಾರ್ಗಸೂಚಿ ಸಿದ್ಧಪಡಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಸೂಚಿಸಿದ್ದಾರೆ.
ಈ ಹಿನ್ನೆಲೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದು, ನಾಳೆ ಅಥವಾ ನಾಡಿದ್ದು ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಭೀತಿ ಹುಟ್ಟಿಸುತ್ತಿದ್ದು ಮತ್ತು ರೂಪಾಂತರ ಕರೋನ ಕರೋನ ಹಾವಳಿಯ ಆತಂಕ ಶುರುವಾದ ಕಾರಣ ಸೋಂಕು ತಡೆಗಾಗಿ ಸರ್ಕಾರವು ಈ ನೂತನ ನಿಯಂತ್ರಣಾ ನಿಯಮಾವಳಿ ಜಾರಿಗೊಳಿಸಲು ಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.