ರಾಜ್ಯ ಸಚಿವ ಸಂಪುಟ: ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ 7 ನೂತನ ಸಚಿವರು

ಬೆಂಗಳೂರು: ಸಿಎಂ  ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದ 7 ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಇಂದು ಪ್ರಮಾಣವಚನ ಭೋದಿಸಿದರು. ರಾಜಭವನದ ಗಾಜಿನಮನೆಯಲ್ಲಿ ಇಂದು ಮದ್ಯಾನ 3.50 ಕ್ಕೆ ವಿಧಾನ ಪರಿಷತ್ ಸದಸ್ಯರಾದ…

New Ministers vijayaprabha

ಬೆಂಗಳೂರು: ಸಿಎಂ  ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದ 7 ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಇಂದು ಪ್ರಮಾಣವಚನ ಭೋದಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಇಂದು ಮದ್ಯಾನ 3.50 ಕ್ಕೆ ವಿಧಾನ ಪರಿಷತ್ ಸದಸ್ಯರಾದ ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್, ಅರವಿಂದ್ ಲಿಂಬಾವಳಿ, ಉಮೇಶ್ ಕತ್ತಿ , ಸಿ.ಪಿ ಯೋಗೇಶ್ವರ್, ಎಸ್ ಅಂಗಾರ ಹಾಗು ಆರ್ ಶಂಕರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಎಂಟಿಬಿ ನಾಗರಾಜ್, ಸಿ.ಪಿ ಯೋಗೇಶ್ವರ್, ಆರ್ ಶಂಕರ್, ಅರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಳ್ಯಾ ವಿಧಾನಸಭಾ ಕ್ಷೇತ್ರದ ಎಸ್ ಅಂಗಾರ ಹಾಗು ಮಹದೇಪುರ ಕ್ಷೇತ್ರದ ಶಾಸಕ ಅರವಿಂದ್ ಲಿಂಬಾವಳಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಉಕ್ಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಹಾಗು ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಸಮಾರಂಭದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಹಾಗು ಅಶ್ವಥ್ ನಾರಾಯಣ್, ಕಂದಾಯ ಸಚಿವ ಆರ್ ಅಶೋಕ್, ವಸತಿ ಸಚಿವ ವಿ ಸೋಮಣ್ಣ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.