T20 World Cup : ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದ.ಆಫ್ರಿಕಾಕ್ಕೆ ನ್ಯೂಜಿಲೆಂಡ್ ಬಿಗ್ ಶಾಕ್ ನೀಡಿ, ಮೊದಲ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ
ಹೌದು, 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಹೈವೋಲ್ಟೇಜ್ ಕದನದಲ್ಲಿ ನ್ಯೂಜಿಲೆಂಡ್ ಮಹಿಳಾ ಪಡೆ 32 ರನ್ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವ ಮೂಲಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದು, ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೇರಿದ್ದ ದಕ್ಷಿಣ ಆಫ್ರಿಕಾ ತಂಡ ಮತ್ತೊಮ್ಮೆ ಫೈನಲ್ ಪಂದ್ಯದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ.
ಇದನ್ನೂ ಓದಿ: Bhagyalakshmi yojana : ಫಲಾನುಭವಿಗಳಿಗೆ ಸಿಗುವ ಮೊತ್ತ ಎಷ್ಟು? ಭಾಗ್ಯಲಕ್ಷ್ಮೀ ಬಾಂಡ್ ಹಣ ಡ್ರಾ ಮಾಡಲು ನಿಯಮಗಳೇನು?
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ನಲ್ಲಿ 5 ವಿಕೆಟ್‌ಗೆ 158 ರನ್ ಗಳಿಸಿತು. ತಂಡದ ಬ್ಯಾಟರ್‌ಗಳಲ್ಲಿ ಅಮೆಲಿಯಾ ಕೆರ್ 43, ಬ್ರೂಕ್ 38, ಬೇಟ್ಸ್ 32 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಮರಿಜಾನ್ನೆ ಕಪ್ ಹಾಗು ನಾನ್ಕುಲುಲೆಕೊ ಮ್ಲಾಬಾ ತಲಾ 2 ಪಡೆದರು.
ದಕ್ಷಿಣ ಆಫ್ರಿಕಾಕ್ಕೆ 32 ರನ್ ಗಳಿಂದ ಸೋಲು
ಇನ್ನು, ನ್ಯೂಜಿಲೆಂಡ್ ನೀಡಿದ 159 ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 126/9 ಮಾತ್ರ ರನ್ ಗಳಿಸಿ, 32 ರನ್ ಗಳಿಂದ ಪರಾಭವಗೊಂಡಿತು. ದಕ್ಷಿಣ ಆಫ್ರಿಕಾ ಪರ ಲಾರಾ ವೊಲ್ವಾರ್ಡ್ಟ್ 33, ತಜ್ಮಿನ್ ಬ್ರಿಟ್ಸ್ 17, ಕ್ಲೋಯ್ ಟ್ರಯಾನ್ 14 ರನ್ ಗಳಿಸಿದರು. ನ್ಯೂಜಿಲೆಂಡ್ ಪರ ಬೌಲರ್ ಗಳಾದ ರೋಸ್ಮರಿ ಮೈರ್ ಹಾಗು ಅಮೆಲಿಯಾ ಕೆರ್ ತಲಾ 3 ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇಲ್ಲಿಯವರೆಗೆ ಆಸ್ಟ್ರೇಲಿಯ 6 ಬಾರಿ ಗೆದ್ದರೆ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಲ 1 ಬಾರಿ ಗೆದ್ದಿದೆ.
ಇನ್ನು, ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಪರ ಅಮೋಘ ಆಲ್ರೌಂಡರ್ ಪ್ರದರ್ಶನ ನೀಡಿದ ಅಮೆಲಿಯಾ ಕೆರ್ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗು ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಗಳನ್ನು ಪಡೆದುಕೊಂಡರು.