News of the week : ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾ೦ಗ ಬ೦ಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆ, ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ ಸೇರಿದಂತೆ ರಾಜ್ಯದಲ್ಲಿ ಈ ವಾರ ನಡೆದ ಪ್ರಮುಖ ಸುದ್ದಿಗಳ ಮಾಹಿತಿ ಇಲ್ಲದೆ..
ರಾಜ್ಯದಲ್ಲಿ ಈ ವಾರ ಭಾರಿ ಮಳೆ
ಬ೦ಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಈ ವಾರ ಭಾರಿ ಮಳೆಯಾಗುತ್ತಿದೆ. 12ಕ್ಕೂ ಹೆಚ್ಚು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಇನ್ನೂ, ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Heavy rain | ಕರ್ನಾಟಕದಲ್ಲಿ ಇನ್ನೆರಡು ದಿನ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹೈಕೋರ್ಟ್ ಮೆಟ್ಟಿಲೇರಿದ ಕಾಟೇರ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ, ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ನಟ ದರ್ಶನ್ ಬೇಲ್‌ಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಮುನಿರತ್ನಗೆ ಬಿಡುಗಡೆ ಭಾಗ್ಯ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾ೦ಗ ಬ೦ಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು. 20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕ ಮುನಿರತ್ನ ಬುಧವಾರ ಜೈಲಿನಿಂದ ಬಿಡುಗಡೆಯಾಗದರು
ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಜಾ – ದರ್ಶನ್‌ಗೆ ಜೈಲೇ ಗತಿ..!
ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ
ನಟ ದರ್ಶನ್ ಮತ್ತು ಗ್ಯಾಂಗ್ ಭೀಕರವಾಗಿ ಕೊಲೆಗೈದಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿ ಅ.16ರಂದು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ನಟಿ ಅಮೂಲ್ಯ ಸಹೋದರ ನಿಧನ
ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವರ ಸಹೋದರ, ನಿರ್ದೇಶಕರಾಗಿದ್ದ ದೀಪಕ್ ಅರಸ್ ಅವರು ಗುರುವಾರ ನಿಧನರಾದರು. ನಟಿ ಅಮೂಲ್ಯ ಅವರು ಸೇರಿದಂತೆ ಅವರ ಇಡಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದ್ದು,ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮುಡಾ ಕಚೇರಿ ಮೇಲೆ ಇಡಿ ದಾಳಿ
ಇಡೀ ರಾಜ್ಯದಲ್ಲೇ ದೊಡ್ಡ ಸುದ್ದಿಯಾಗಿದ್ದ ಮುಡಾ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದು, 20 ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Buddhism: ಹಿಂದೂ ಧರ್ಮ ಸುಧಾರಿಸುವ ಲಕ್ಷಣವಿಲ್ಲವೆಂದ ಸಚಿವ ಮಹದೇವಪ್ಪ!
ಬೌದ್ಧ ಧರ್ಮ ! ಸ್ವೀಕರಿಸಲಿರುವ ಸಚಿವರು
ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರು ಹಿಂದೂ ಧರ್ಮದಲ್ಲಿನ ಜಾತಿಯತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಬೌದ್ಧ ಧರ್ಮ ಸ್ವೀಕರಿಸುವುದಾಗಿ ಹೇಳಿದ್ದಾರೆ. ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ಬೌದ್ಧ ಧರ್ಮ ಪ್ರಚಾರ ಮಾಡಲು ಬಯಸುತ್ತೇನೆ ಎಂದಿದ್ದಾರೆ.
ಬಿ. ನಾಗೇಂದ್ರ ಜೈಲಿನಿಂದ ರಿಲೀಸ್
ಇನ್ನು, ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾದರು. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.