ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗುರುವಾರ ರಾತ್ರಿ ತುಮಕೂರು, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ.
ಇನ್ನು ಚಿತ್ರದುರ್ಗದ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿಯಿಡಿ ಗುಡುಗು ಸಹಿತ ಬಾರಿ ಮಳೆಯಾಗಿದ್ದು, ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜಿಲ್ಲೆಯಲ್ಲಿ ಇಂದು, ನಾಳೆ ಕೂಡ ಮಳೆಯಾಗಲಿದೆ ಎನ್ನಲಾಗಿದೆ.
ಬೆಂಗಳೂರು ನಗರದಲ್ಲಿ ಫೆಬ್ರುವರಿ.20 ಮತ್ತು 21 ರಂದು ಮಳೆಯಾಗಲಿದ್ದು, ಧಾರವಾಡ, ಗದಗ, ಕಲಬುರುಗಿ, ರಾಯಚೂರು ಮೈಸೂರಿನಲ್ಲಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎನ್ನಲಾಗಿದೆ. ಇನ್ನು ಮಡಿಕೇರಿಯಲ್ಲಿ ಫೆಬ್ರುವರಿ 21ರವರೆಗೆ, ಮಂಡ್ಯದಲ್ಲಿ ನಾಳೆಯಿಂದ ಫೆಬ್ರುವರಿ 22ರ ತನಕ, ಮಂಗಳೂರಿನಲ್ಲಿ ಫೆಬ್ರುವರಿ 20ರವರೆಗೆ ಮಳೆಯಾಗಲಿದೆ ಎನ್ನಲಾಗಿದೆ.
ಹೇಗಿದೆ ಇಂದಿನ ಹವಾಮಾನ ವರದಿ:
ಇಂದು ರಾಜ್ಯದ ಹಲವೆಡೆ ಸಣ್ಣ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆಗೆ ಸೂರ್ಯ ಪ್ರಖರಿಸಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕಾರವಾರದಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಮಂಗಳೂರಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.