ಬೆಂಗಳೂರು: ಇಂಗ್ಲಿಷ್ ಗೆ ಮಣೆ ಹಾಕುವ ನಾವು ಹಿಂದಿ ಭಾಷೆಯನ್ನು ಏಕೆ ತಿರಸ್ಕರಿಸಬೇಕು ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂದು 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಹೇಳಿಕೆಗೆ ನಟ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು.
ನಮ್ಮ ರಾಜ್ಯದ ಪ್ರತಿಯೊಂದು ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು.
1/2 pic.twitter.com/VsrCFMISjq— Nikhil Kumar (@Nikhil_Kumar_k) January 23, 2021