ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ಇಂದು ಬೆಳಗ್ಗೆ ಮಂಡನೆಯಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಇಂದು ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರ 4ನೇ ಬಜೆಟ್ ಆಗಿದ್ದು, ಬಜೆಟ್ ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯ ವಲಯಗಳಿಗೆ ಹೆಚ್ಚಿನ ಹಣಕಾಸು ನೆರವು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು, ಕೋವಿಡ್ ಸಾಂಕ್ರಾಮಿಕದ ಪರಿಣಾಮ 2 ವರ್ಷಗಳ ಕಾಲ ನಲುಗಿದ್ದ ದೇಶದ ಆರ್ಥಿಕತೆಗೆ ಕೇಂದ್ರ ಸರ್ಕಾರ ಮಂಡಿಸಲಿರುವ ಈ ಬಜೆಟ್ ಬಲ ತುಂಬಲಿದೆಯೇ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.