ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ ಇಲ್ಲ; ಪರಿಹಾರದ ಮಾತೆಲ್ಲಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಸೋಮವಾರ ಸಂಸತ್ತಿನಲ್ಲಿ ಹೇಳಿದ್ದು, ವಿಪಕ್ಷಗಳ ಟೀಕೆ ಕಾರಣವಾಗಿದೆ. ದೇಶಕ್ಕೆ ಕೊರೊನಾ ಸೋಂಕು…

Government, migrant deaths, migrant deaths, coronavirus, lockdown

ನವದೆಹಲಿ: ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಸೋಮವಾರ ಸಂಸತ್ತಿನಲ್ಲಿ ಹೇಳಿದ್ದು, ವಿಪಕ್ಷಗಳ ಟೀಕೆ ಕಾರಣವಾಗಿದೆ.

ದೇಶಕ್ಕೆ ಕೊರೊನಾ ಸೋಂಕು ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಉದ್ಯೋಗ ಕಳೆದುಕೊಂಡ ಲಕ್ಷಾಂತರ ಕಾರ್ಮಿಕರು ನಗರಪ್ರದೇಶಗಳಿಂದ ತಮ್ಮ ವಲಸೆ ತೆರಳಿದ್ದು, ಈ ವೇಳೆ ಹಲವರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದ್ದವು. ಮೃತ ವಲಸೆ ಕಾರ್ಮಿಕರಿಗೆ ನೀಡಿರುವ ಪರಿಹಾರದ ಕುರಿತು ಮಾಹಿತಿ ನೀಡುವಂತೆ ಲೋಕಸಭೆಯಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದ ಮೊದಲ ದಿನ ಸಭೆಯಲ್ಲಿ ಈ ಕುರಿತು ಸರ್ಕಾರ ಲಿಖಿತ ಉತ್ತರ ನೀಡಿದೆ.

ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಸರ್ಕಾರ ಹೇಳಿದೆ. ಸದ್ಯ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಿರುವ ರಾಹುಲ್ ಗಾಂಧಿ ಕೂಡ ಈ ಕುರಿತು ಟೀಕಿಸಿದ್ದಾರೆ.
“ನೀವು ಎಣಿಸದಿದ್ದರೆ, ವಲಸೆ ಕಾರ್ಮಿಕರ ಸಾವುಗಳು ನಡೆದಿಲ್ಲವೇ?” ಎಂದು ಟೀಕಿಸಿ ಮಂಗಳವಾರ ಟ್ವೀಟ್ ಮಾಡಿದ್ದಾರೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.