ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದರೆ ನಿನ್ನೆಗೆ ಹೋಲಿಸಿದರೆ ಇಂದು ಚಿನ್ನ ಹಾಗೂ ಬೆಳ್ಳಿಯ ದರ ನಿಟ್ಟುಸಿರು ಬಿಡುವಷ್ಟು ಇಳಿಕೆ ಕಂಡಿದೆ.
ಹೌದು, ನವದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ 133 ರೂ. ಇಳಿಕೆಯಾಗಿ, 50,719ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿಗೆ 664 ರೂ. ಕಡಿಮೆಯಾಗಿ 59,781ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.