ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಇನ್ನು ಮುಂದೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಪ್ರವಾಸಿಗರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭೇಟಿ ನೀಡಬಹುದಾಗಿದ್ದು, ಸಫಾರಿಗೂ ಕೂಡ ಅವಕಾಶ ಇರಲಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ.
ಇನ್ನು, ಈ ವೇಳೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ಕರೋನ ಹೆಚ್ಚಳ ಹಿನ್ನಲೆ ಬೆಂಗಳೂರು ಸೇರಿದಂತೆ ಹಲವೆಡೆ ಶಾಲಾ- ಕಾಲೇಜುಗಳು ಬಂದ್ ಆಗಿದ್ದವು. ಮುಂದಿನ ಸೋಮವಾರದಿಂದ ಬೆಂಗಳೂರು ನಗರದಲ್ಲಿನ ಶಾಲಾ-ಕಾಲೇಜುಗಳೂ ಕೂಡ ಕಾರ್ಯಾರಂಭ ಮಾಡಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



