ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಲಸಿಕೆಯ ಕೊರತೆ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಈ ವೇಳೆ, ರಾಜ್ಯಕ್ಕೆ ಈಗಾಗಲೇ 10 ಲಕ್ಷ ರೆಂಡಿಸಿವಿರ್ ಲಸಿಕೆ ಬಂದಿದೆ. ಲಸಿಕೆ ಹೆಚ್ಚಿಸಿದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕಿನ ಪ್ರಮಾಣವು ಶೇ.47ರಷ್ಟಿತ್ತು. ಆದರೆ ಲಾಕ್ ಡೌನ್ ಹೇರಿದ ಪರಿಣಾಮ ಶೇ.27ರಷ್ಟು ಕಡಿಮೆಯಾಗಿದೆ. ಮುಂದಿನ 1 ವಾರದ ಒಳಗೆ ಪಾಸಿಟಿವಿಟಿ ದರ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಮೇ 23ರ ಸಭೆ ಬಳಿಕ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ:
ಇನ್ನು ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸಂಪುಟದ ಬಹುತೇಕ ಸಚಿವರು ಈಗಾಗಲೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಭಿಪ್ರಾಯವೂ ಕೂಡ ಇದೆ ಆಗಿದೆ ಎಂದು ಹೇಳಿದ್ದಾರೆ.
ಇನ್ನು ಮೇ 23ರ ಸಂಪುಟ ಸಭೆ ಬಳಿಕ ಲಾಕ್ ಡೌನ್ ವಿಸ್ತರಣೆ ಸಂಬಂಧ ಖುದ್ದು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ಮಾಹಿತಿ ನೀಡಿದ್ದಾರೆ. ಈ ವೇಳೆ, ಇಂದು 2 ಲಕ್ಷ ಕೋವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬರಲಿದೆ ಎಂದು ತಿಳಿಸಿದರು.