ರಾಜ್ಯದಲ್ಲಿ ನಗರ ಸ್ಥಳೀಯ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕನಿಷ್ಠ ವೇತನವನ್ನು ಜಾರಿಗೊಳಿಸಲಿದೆ.
ಈ ಕುರಿತು ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.
ನೌಕರರ ಕನಿಷ್ಠ ವೇತನ ಜಾರಿಗೊಳಿಸಲು ಸರ್ಕಾರ ಸಜ್ಜಾಗಿದ್ದು, ಹೀಗಾಗಿ ಈ ಹಿಂದೆ ಇರುವ ವೇತನ ಇನ್ಮುಂದೆ ಭಾರೀ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಕುರಿತಂತೆ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಸರ್ಕಾರ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ ಎನ್ನಲಾಗಿದೆ.