Onion price | ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಕೆಜಿ’ಗೆ 1 ರೂ…!

Onion price | ವಿಜಯನಗರ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಕುಸಿತವಾಗಿದ್ದು, ಕೆಜಿಗೆ ಕೇವಲ ಒಂದು ರೂಪಾಯಿಗೆ ಮಾರಾಟವಾಗುತ್ತಿದೆ. 50 ಕೆಜಿ ಚೀಲದ ಈರುಳ್ಳಿಗೆ 800 ರೂಗಿಂತ ಹೆಚ್ಚು ಖರ್ಚು ಮಾಡಿ ಬೆಳೆದ ರೈತರಿಗೆ ಕೇವಲ…

onion price

Onion price | ವಿಜಯನಗರ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಕುಸಿತವಾಗಿದ್ದು, ಕೆಜಿಗೆ ಕೇವಲ ಒಂದು ರೂಪಾಯಿಗೆ ಮಾರಾಟವಾಗುತ್ತಿದೆ. 50 ಕೆಜಿ ಚೀಲದ ಈರುಳ್ಳಿಗೆ 800 ರೂಗಿಂತ ಹೆಚ್ಚು ಖರ್ಚು ಮಾಡಿ ಬೆಳೆದ ರೈತರಿಗೆ ಕೇವಲ 50 ರೂ. ಮಾತ್ರ ಸಿಗುತ್ತಿದೆ.

ಈ ಬಾರಿ ಉತ್ತಮ ಫಸಲಿನಿಂದ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಬೆಲೆ ಇಳಿಕೆಯಿಂದ ಆಘಾತ ಉಂಟಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿ ಚೀಲಕ್ಕೆ 1,600 ರಿಂದ ₹3450 ವರೆಗೆ ದರ ಸಿಕ್ಕಿತ್ತು. ಈ ಬಾರಿ ಕೆಜಿಗೆ ಕೇವಲ ಒಂದರಿಂದ 5 ರೂಪಾಯಿಗೆ ಇಳಿದಿದೆ.

ಡಿಸಿ ಕಚೇರಿ ಆವರಣದಲ್ಲಿ ಈರುಳ್ಳಿ ಸುರಿದು ರೈತರ ಆಕ್ರೋಶ

ಮಳೆ, ಬೆಲೆ ಕುಸಿತದಿಂದಾಗಿ ಈರುಳ್ಳಿಯನ್ನು ಕೇಳುವವರಿಲ್ಲದಂತಾಗಿದೆ. ಹೀಗಾಗಿ ಆಕ್ರೋಶಗೊಂಡ ರೈತರು ಈರುಳ್ಳಿಯನ್ನು DCಕಚೇರಿ ಆವರಣದಲ್ಲಿ ಸುರಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Vijayaprabha Mobile App free

ರೈತರ ನಿರೀಕ್ಷೆಯಂತೆ, ಉತ್ತಮ ಬೆಳೆ ಬಂದರೂ ಲಾಭ ಸಿಗಲಾರದೇ ರೈತರು ದಿಕ್ಕು ತೋಚದಂತಾಗಿದ್ದಾರೆ. ರೈತರು ಬೆಳೆದಿರೋ ಈರುಳ್ಳಿಗೆ ಸರ್ಕಾರ ಕೂಡಲೇ ವೈಜ್ಞಾನಿಕವಾಗಿ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಸರ್ಕಾರ ಪರಿಹಾರ ಒದಗಿಸುವ ಮೂಲಕ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಬೇಕು. ಇಲ್ಲವಾದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.