Onion price : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿರುವ ಈ ಸಮಯದಲ್ಲಿ, ಈರುಳ್ಳಿ ಬೆಲೆ ಕೂಡ ಮತ್ತೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣೀರಿಳಿಸುತ್ತಿದೆ.
ಹೌದು, ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರುಪಾಲಾಗಿದೆ. ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಮಾರುಕಟ್ಟೆಗೆ ನಿಗದಿತ ಪ್ರಮಾಣದಲ್ಲಿ ಈರುಳ್ಳು ಪೂರೈಕೆಯಾಗುತ್ತಿಲ್ಲ. ಇದರ ಪರಿಣಾಮ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 80 ರೂಪಾಯಿವರೆಗೆ ಹೆಚ್ಚಾಗಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.
ಇದನ್ನೂ ಓದಿ: Panchanga | ಇಂದು ಭಾನುವಾರ 10-11-2024; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
ಸದ್ಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿಗೆ ₹70 ರಿಂದ ₹80 ಇದ್ದರೆ, ಸಣ್ಣಪುಟ್ಟ ಅಂಗಡಿಗಳಲ್ಲಿ ₹90 ಆಗಿದೆ. ಮುಂದಿನ ದಿನಗಳಲ್ಲಿ ₹100 ರ ಗಡಿದಾಟುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.