onion price : ರಾಜ್ಯದಲ್ಲಿ ಮಳೆಯಾಗುತ್ತಿರುವ ಪರಿಣಾಮ 1 ತಿಂಗಳಿನಿಂದ ಈರುಳ್ಳಿ ಬೆಲೆ ಏರಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಗ್ರಾಹಕರಿಗೆ ಗುಡ್ನ್ಯೂಸ್ ನೀಡಿದ್ದು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಕಡಿಮೆ ಬೆಲೆಗೆ ಈರುಳ್ಳಿ ವಿತರಣೆ ಮಾಡಲಾಗುತ್ತಿದೆ.
ಹೌದು, ರಾಜ್ಯದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದುಬಾರಿಯಾಗಿ ಜನಸಾಮಾನ್ಯರಿಗೆ ಭಾರೀ ಸಂಕಷ್ಟ ಎದುರಾಗಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ಈರುಳ್ಳಿ ಗ್ರಾಹಕರಿಗೆ ಭಾರೀ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಬೆಂಗಳೂರು ಶಾಖೆ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಈರುಳ್ಳಿ ಮಾರಾಟ ಮಾಡಲು ಪ್ರಾರಂಭಿಸಿದೆ.
ಇದನ್ನೂ ಓದಿ: ಈರುಳ್ಳಿ ಕಣ್ಣಲ್ಲಿ ನೀರು ತರಿಸಿದರೂ, ಆಯುರ್ವೇದದ ಪ್ರಕಾರ ಈರುಳ್ಳಿ ತಿನ್ನುವುದರಿಂದ ಶರೀರಕ್ಕೆ ಆಗುವ ಲಾಭಗಳೇನು ಗೊತ್ತಾ?
onion price : ಮೊಬೈಲ್ ವ್ಯಾನ್ ಮೂಲಕ ಮಾರಾಟ
ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಗುಣಮಟ್ಟದ ಈರುಳ್ಳಿಯನ್ನು ಖರೀದಿಸಿ, ದೇಶದ ಮೆಟ್ರೋ ಸಿಟಿಗಳಲ್ಲಿ ವಿತರಣೆ ಮಾಡಲು ಆರಂಭಿಸಿದೆ. ಬೆಂಗಳೂರಿನಲ್ಲಿ ಸೋಮವಾರದಿಂದ 35 ರೂಪಾಯಿಗೆ ಒಂದು ಕಿಲೋ ಈರುಳ್ಳಿಯನ್ನು ಮೊಬೈಲ್ ವ್ಯಾನ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗುವ ವರೆಗೂ ಮೊಬೈಲ್ ವ್ಯಾನ್ ಮಾರಾಟ ಮುಂದುವರಿಯಲಿದೆ.