ಕೊರೋನಾ ಲಸಿಕೆಯನ್ನು ಪಡೆಯಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಅರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಹೌದು, ಗ್ರಾಮೀಣ ಭಾಗದ ಅನೇಕ ಜನರು ಕರೋನ ಲಸಿಕೆ ಪಡೆಯುವಲ್ಲಿ ಕಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ, ಆನ್ ಲೈನ್ ಬುಕಿಂಗ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಅರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು, 18 ವರ್ಷ ಮೇಲ್ಪಟ್ಟವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು ಎಂದು ಹೇಳಿದ್ದು, ಜೊತೆಗೆ ಸಹಾಯವಾಣಿ ಸಂಖ್ಯೆ 1075 ಕೂಡ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಅರೋಗ್ಯ ಸಚಿವಾಲಯ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.