ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ‘ಮಾದರಿ ಪಾರಂಪರಿಕ ಗ್ರಾಮ’ವನ್ನು ಇಂದು ಉದ್ಘಾಟಿಸಿದರು. ಬೆಂಗಳೂರಿನ ಜಕ್ಕೂರು ಬಳಿ ನಿರ್ಮಿಸಲಾಗಿರುವ ಈ ಮಾದರಿ ಗ್ರಾಮದಲ್ಲಿ ಕರ್ನಾಟಕದ ಗ್ರಾಮೀಣ ಜನರ ಜೀವನ ಶೈಲಿ, ಪರಂಪರೆ, ಕಲೆಗಳು ಅನಾವರಣಗೊಂಡಿವೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣೆಬೈರೇಗೌಡ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ ಕೆ ಆತಿಕ್ ಅವರು ಉಪಸ್ಥಿತರಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ @ikseshwarappa ಹಾಗೂ ಬ್ಯಾಟರಾಯನಪುರ ಶಾಸಕ @krishnabgowda, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ @lkatheeq ಉಪಸ್ಥಿತರಿದ್ದರು. (2/2) pic.twitter.com/rsk2BcalXg
— CM of Karnataka (@CMofKarnataka) November 13, 2020