ನವದೆಹಲಿ: ಇದೀಗ ಕನ್ನಡದಲ್ಲಿಯೂ ಇಂಜಿನಿಯರಿಂಗ್ ಕೋರ್ಸ್, ಪರೀಕ್ಷೆ ಬರೆಯಬಹುದಾಗಿದ್ದು, ಈ ಮೂಲಕ ಕನ್ನಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇನ್ನು ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವುದಕ್ಕೆ ಅವಕಾಶ ನೀಡಿದೆ.
ಹೌದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) 2020-21ನೇ ಶೈಕ್ಷಣಿಕ ಸಾಲಿನಿಂದ ಕನ್ನಡ ಸೇರಿದಂತೆ 8 ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಅವಕಾಶ ನೀಡಿದೆ. ಹೀಗಾಗಿ ಇನ್ಮೇಲೆ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಕನ್ನಡ ಭಾಷೆಯಲ್ಲಿಯೂ ಕಲಿಯಲು ಸಾದ್ಯವಾಗಲಿದ್ದು, ಹಿಂದಿ, ತಮಿಳು, ಮಲಯಾಳಂ, ಗುಜರಾತಿ, ಬಂಗಾಳಿ ಸೇರಿದಂತೆ 8 ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ ವ್ಯಾಸಂಗ ಮಾಡಲು ಅವಕಾಶ ಸಿಕ್ಕಿದೆ.
ಇದರಿಂದ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ, ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಲು ಕಷ್ಟವೆನುಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಅನುಕೂಲವಾಗಲಿದೆ.