ಭಾರಿ ಮಳೆ ಹಿನ್ನಲೆ; ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆರೆಂಜ್ & ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಈಗಾಗಲೇ ರಾಜ್ಯದ ವಿವಿದ ಜಿಲ್ಲೆಗಳಲ್ಲಿ  ಮಳೆಯಿಂದ ಭಾರಿ ಅವಾಂತರ ಉಂಟಾಗಿದ್ದು, ಬೆಳೆ ಹಾನಿ ಸೇರಿದಂತೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ ಅ.15ರವರೆಗೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

rain vijayaprabha news

ಬೆಂಗಳೂರು: ಈಗಾಗಲೇ ರಾಜ್ಯದ ವಿವಿದ ಜಿಲ್ಲೆಗಳಲ್ಲಿ  ಮಳೆಯಿಂದ ಭಾರಿ ಅವಾಂತರ ಉಂಟಾಗಿದ್ದು, ಬೆಳೆ ಹಾನಿ ಸೇರಿದಂತೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ ಅ.15ರವರೆಗೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ & ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿಯೂ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಬೆಳಗಾವಿ, ಗದಗ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ & ತುಮಕೂರು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.