ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ವಿಧಿವಶ; ಗಣ್ಯರ ಸಂತಾಪ

ಉಡುಪಿ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ(85) ಅವರು ಉಪುಪಿ ಜಿಲ್ಲೆಯ ಅಂಬಲವಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ಮದ್ವ ಸಿದ್ದಂತಾದ…

Dr. Bannanje Govindacharya vijayaprabha

ಉಡುಪಿ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ(85) ಅವರು ಉಪುಪಿ ಜಿಲ್ಲೆಯ ಅಂಬಲವಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ಮದ್ವ ಸಿದ್ದಂತಾದ ಪ್ರತಿಪಾದಕರು ಪ್ರವಚನಕಾರರು ಆಗಿದ್ದರು. ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ನಟ ಡಾ. ವಿಷ್ಣುವರ್ಧನ್ ಅವರ ಆದ್ಯಾತ್ಮಿಕ ಗುರುಗಳಾಗಿದ್ದು, ಪತ್ರಕರ್ತರಾಗಿ ಅನೇಕ ಅಂಕಣಗಳನ್ನು ಕೂಡ ಬರೆದಿದ್ದಾರೆ.

ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿ.ಟಿ ರವಿ, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Vijayaprabha Mobile App free

ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ:

ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ನಾಡಿನ ಹಿರಿಯ ವಿದ್ವಾಂಸ, ಸಾಹಿತಿ, ಕವಿ, ಪದ್ಮಶ್ರೀ ಪುರಸ್ಕೃತ ಪ್ರವಚನಕಾರರಾದ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಡಾ. ಬನ್ನಂಜೆ ಅವರ ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಡಾ. ಬನ್ನಂಜೆ ಅವರು ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು ಎಂದು ಹೇಳಿದ್ದಾರೆ.

ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಓಂ ಶಾಂತಿ ಎಂದು ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.