ಇಸ್ಲಾಮಾಬಾದ್: ಚೀನಾದ ಕರೋನ ಲಸಿಕೆ ಪಡೆದ ಮರುದಿನವೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ರಾಷ್ಟ್ರೀಯ ಆರೋಗ್ಯ ಸೇವೆಗಳ ಕುರಿತು ಪಾಕ್ ಪ್ರಧಾನಿಗೆ ವಿಶೇಷ ಸಹಾಯಕರಾಗಿರುವ ಫೈಸಲ್ ಸುಲ್ತಾನ್ ಅವರು, ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಆಕ್ಷಣಗಳು ಇಲ್ಲದಿದ್ದರು ಸಹ ಮುಂಜಾಗ್ರತಾ ಕ್ರಮವಾಗಿ ಅವರು ಮನೆಯಲ್ಲೇ ಐಸೋಲೇಷನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಿನ್ನೆಯಷ್ಟೇ ಚೀನಾದ ಸಿನೋಫಾರ್ಮ್ ಕರೋನ ಲಸಿಕೆಯನ್ನು ಪಡೆದಿದ್ದರು ಎಂಬುದು ಇಲ್ಲಿ ಗಮನಾರ್ಹವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.