ಬೆಂಗಳೂರು: ಮೊಬೈಲ್ ಜಾಸ್ತಿ ಬಳಸಬೇಡ, ಓದು ಎಂದು ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಬೇಸರಗೊಂಡ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಶಶಾಂಕ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಮನೆಯಲ್ಲಿ ಈತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದನು.
ಜಾಸ್ತಿ ಮೊಬೈಲ್ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ಕೋಪಗೊಂಡ ಶಶಾಂಕ್ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ದುರಂತವೇ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.