ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತಮ್ಮ ಮೇಲ್ಮುಖ ಪಥವನ್ನು ಮುಂದುವರೆಸಿದ್ದು ದೇಶಾದ್ಯಂತ ಪ್ರತಿದಿನ ಹೊಸ ಗರಿಷ್ಠ ಮಟ್ಟವನ್ನು ತಲುಪುತ್ತಿವೆ. ಸತತ 10ನೇ ದಿನವೂ ಇಂಧನ ದರದಲ್ಲಿ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದು ಲೀಟರ್ ಗೆ 89.88 ರೂ. ಆಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 89.88 ರೂ.(34 ಪೈಸೆ ಏರಿಕೆ) ಆಗಿದ್ದು, ಡೀಸೆಲ್ ದರ 80.27 ರೂ. (32 ಪೈಸೆ ಹೆಚ್ಚಳ) ಆಗಿದೆ.
ಗುರುವಾರ ಚಿನ್ನ, ಬೆಳ್ಳಿಯ ದರದಲ್ಲಿ ಇಳಿಕೆ:
ಇನ್ನು ದೇಶದಲ್ಲಿ ಗುರುವಾರ ಚಿನ್ನದ ಬೆಲೆ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,569 ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹43,750 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹47,730 ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ ₹71,200 ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,690 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,690 ದಾಖಲಾಗಿದೆ. ಒಂದು ಕೆಜಿ ಬೆಳ್ಳಿ ದರ ₹69,600 ಆಗಿದೆ.