ಬೆಂಗಳೂರು: ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ದರ ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 31 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡಿದೆ. ಜೂನ್ ತಿಂಗಳೊಂದರಲ್ಲೇ ಪೆಟ್ರೋಲ್, ಡೀಸೆಲ್ ದರ 15 ಬಾರಿ ಏರಿಕೆ ಕಂಡಿದೆ ಎಂಬುದು ಶಾಕಿಂಗ್ ಸಂಗತಿಯಾಗಿದೆ.
ಇನ್ನು, ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.75 ರೂ. ಇದ್ದು, ಡೀಸೆಲ್ ದರ 94.25 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 104.56 ರೂ. ಇದ್ದು, ಡೀಸೆಲ್ ದರ 96.42 ರೂ. ಆಗಿದೆ. ಈ ಮೂಲಕ ಇಂಧನ ದರ ಈವರೆಗಿನ ಗರಿಷ್ಠ ಮಟ್ಟ ತಲುಪಿದ್ದು, ಐತಿಹಾಸಿಕ ದಾಖಲೆ ಸೃಷ್ಟಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.