ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆಯೇ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ,ಪರ್ಯಾಯ ಇಂದನಗಳತ್ತ ಮುಖ ಮಾಡಿರುವ ಭಾರತ ಬರುವ ವರ್ಷಗಳಲ್ಲಿ ಪೆಟ್ರೋಲ್ ಬಳಕೆಯ ಅನಿವಾರ್ಯತೆ ಇರುವುದಿಲ್ಲ. ಭಾರತದಲ್ಲಿ ಪರ್ಯಾಯ ಇಂಧನ ಬಳಕೆ ಸೇರಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚುವ ಕಾರಣ ತೈಲ ಬಳಕೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲ, ಆಳವಾದ ಬಾವಿಯ ನೀರಿನಿಂದ ಹಸಿರು ಹೈಡ್ರೋಜನ್ ತಯಾರಿಸಬಹುದು ಮತ್ತು ಕೆಜಿಗೆ 70 ರೂಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.