ಬೆಂಗಳೂರು: ರಾಜ್ಯದ ಎಲ್ಲಾ ಪದವಿ ಕಾಲೇಜುಗಳ ಭೌತಿಕ ತರಗತಿಗಳನ್ನು ಜುಲೈ 26ರಿಂ ದಲೇ ಆರಂಭಿಸುವಂತೆ ರಾಜ್ಯ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ.
ಆದೇಶದಲ್ಲಿ ಪದವಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೋನಾ ಲಸಿಕೆಯನ್ನು ಪಡೆದು ತರಗತಿಗಳಿಗೆ ಹಾಜರಾಗಬೇಕು ಎಂದೂ ಸರ್ಕಾರ ಸ್ಪಷ್ಟಪಡಿಸಿದೆ.
ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ:
ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿ ಸಂಬಂಧ ಶೇಕಡ 50 ರಷ್ಟು ಪ್ರೇಕ್ಷಕರ ಭರ್ತಿಯೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಜೊತೆಗೆ ರಾತ್ರಿ ಕರ್ಫ್ಯೂ ಅವಧಿಯನ್ನು ಕಡಿತಗೊಳಿಸಿದ್ದು, ಇದೀಗ ರಾತ್ರಿ 10ರಿಂದ ಬೆಳ್ಳಿಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಕೋವಿಡ್ ಉಸ್ತುವಾರಿ ಸಚಿವರು & ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.